ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಆರೋಪಿಗಳಾದ ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಭವಿಷ್ಯ ಇಂದು ಹೊರಬೀಳಲಿದೆ. ಈ ಹಿನ್ನೆಲೆ ಆರೋಪಿ ಪವಿತ್ರಾ ಗೌಡ ಪೋಸ್ಟ್ವೊಂದನ್ನು ಹಾಕಿಕೊಂಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪಕ್ಕೆ ಸಂಬಂಸಿದಂತೆ ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್ ಹಾಗೂ `ಡಿ’ ಗ್ಯಾಂಗ್ಗೆ ಹೈಕೋರ್ಟ್ ಜಾಮೀನು ನೀಡಿತ್ತು. ರಾಜ್ಯ ಪೊಲೀಸ್ ಇಲಾಖೆ ನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಆದೇಶವನ್ನು ಕಾಯ್ದಿರಿಸಿತ್ತು. ಗುರುವಾರ ದರ್ಶನ್, ಪವಿತ್ರಾ ಸೇರಿದಂತೆ ಏಳು ಜನರ ಬೇಲ್ ಭವಿಷ್ಯ ನಿರ್ಧಾರವಾಗಲಿದೆ.
ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸುತ್ತಾ? ಅಥವಾ ಮುಂದುವರೆಯುತ್ತಾ ಎಂಬ ಕುತೂಹಲಕ್ಕೆ ಕೌಂಟ್ಡೌನ್ ಶುರುವಾಗಿದ್ದು, ಪವಿತ್ರಾ ಗೌಡ ಜಾಮೀನು ಮುಂದುವರೆಯುವ ನಿರೀಕ್ಷೆಯಲ್ಲಿದ್ದಾರೆ.