ಬ್ರಿಟನ್​ ನೂತನ ಪ್ರಧಾನಿಯಾದ ರಿಷಿ ಸುನಕ್ ಗೆ ಅಭಿನಂದಿಸಿ ಪ್ರಧಾನಿ ಮೋದಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತೀಯ ಮೂಲದ ರಿಷಿ ಸುನಕ್ ಬ್ರಿಟನ್​ ಪ್ರಧಾನಿ ಹುದ್ದೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

 

ಬ್ರಿಟನ್ ಪ್ರಧಾನಿಯಾದ ಹಿನ್ನೆಲೆಯಲ್ಲಿ ನಿಮಗೆ ಅಭಿನಂದನೆಗಳು. ಜಾಗತಿಕ ವಿಷಯಗಳ ವಿಚಾರವಾಗಿ ನಾನು ನಿಮ್ಮೊಂದಿಗೆ ಕೆಲಸ ಮಾಡುವ ಹಾಗೂ 2030ರ ಮಾರ್ಗಸೂಚಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉತ್ಸುಕನಾಗಿದ್ದೇನೆ. ನಾವು ನಮ್ಮ ಐತಿಹಾಸಿಕ ಸಂಬಂಧಗಳನ್ನು ಆಧುನಿಕ ಪಾಲುದಾರಿಕೆಯಾಗಿ ಪರಿವರ್ತಿಸುತ್ತಿರುವಾಗ ಬ್ರಿಟನ್​ ಭಾರತೀಯರ ‘ಜೀವಂತ ಸೇತುವೆ’ ಆಗಿರುವ ನಿಮಗೆ ದೀಪಾವಳಿಯ ವಿಶೇಷ ಶುಭಾಶಯಗಳು ಎಂದು ಮೋದಿ ಹಾರೈಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!