spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳು ಪ್ರಾರಂಭದ ಕುರಿತು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದೇನು?

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ 6 ರಿಂದ 12ನೇ ತರಗತಿವರೆಗೆ ಶಾಲೆಗಳು ಈಗಾಗಲೇ ಆಂಭವಾಗಿವೆ. ಇದರ ನಡುವೆ 1 ರಿಂದ 5ನೇ ತರಗತಿಗಳು ಪ್ರಾರಂಭವಾಗುತ್ವೆ ಎಂದು ಹೇಳಲಾಗ್ತಿತ್ತು. ಈ ಕುರಿತು ಇರುವ ಗೊಂದಲಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತೆರೆ ಎಳೆದಿದ್ದು, 1 ರಿಂದ 5ನೇ ತರಗತಿ ಶಾಲೆ ಆರಂಭದ ಕುರಿತು ಇನ್ನೂ ನಿರ್ಧರಿಸಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, 1 ರಿಂದ 5ನೇ ತರಗತಿ ಶಾಲೆ ಆರಂಭದ ಕುರಿತು ಇನ್ನೂ ನಿರ್ಧರಿಸಿಲ್ಲ. ಸದನ ಮುಗಿಯುವವರೆಗೆ ಯಾವುದೇ ನಿರ್ಮಾನ ಮಾಡಲ್ಲ. ಇನ್ನು ಈ ಕುರಿತು ಯಾವುದೇ ಸಭೆಯೂ ಕೂಡ ನಡೆಸಿಲ್ಲ ಎಂದರು.
ರಾಜ್ಯದಲ್ಲಿ ಕೋವಿಡ್‌ ಮೂರನೇ ಅಲೆ ಬಗ್ಗೆ ಸರ್ಕಾರ ಗಮನ ಹರಿಸುತ್ತಿದೆ. ಮಕ್ಕಳ ಮೇಲೆ ಪರಿಣಾಮ ಬೀರಬಹುದಾದ ಬಗ್ಗೆ ಚರ್ಚಿಸ್ತಿದೆ. ಟಾಸ್ಕ್‌ ಫೋರ್ಸ್‌ ಸಹ ಗಂಭೀರವಾಗಿ ಅಧ್ಯಯನ ಮಾಡ್ತಿದೆ. ಹಾಗಾಗಿ ಸದ್ಯಕ್ಕೆ 1 ರಿಂದ 5ನೇ ತರಗತಿ ಶಾಲೆ ಓಪನ್‌ ಬಗ್ಗೆ ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss