ಭಾರತದಲ್ಲಿ 22 ಲಕ್ಷ ನುರಿತ ಚಾಲಕರ ಕೊರತೆ ಇದ್ಯಂತೆ, ಸಚಿವರು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಭಾರತ 22 ಲಕ್ಷ ನುರಿತ ಚಾಲಕರ ಕೊರತೆಯನ್ನು ಎದುರಿಸುತ್ತಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಲೋಕಸಭೆಗೆ ತಿಳಿಸಿದ್ದಾರೆ. ಅಲ್ಲದೆ ಚಾಲಕರಿಗೆ ಸೂಕ್ತ ತರಬೇತಿ ಸೌಲಭ್ಯಗಳ ಕೊರತೆಯು ಅನೇಕ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಒತ್ತಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ, ಚಾಲಕರಿಗೆ ತರಬೇತಿ ಸಂಸ್ಥೆಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರ 4,500 ಕೋಟಿ ರೂ. ಯೋಜನೆ ಪ್ರಾರಂಭಿಸಿದೆ ಎಂದು ಗಡ್ಕರಿ ತಿಳಿಸಿದರು.

ವಿಶ್ವಬ್ಯಾಂಕ್ ವರದಿಯ ಪ್ರಕಾರ, ಭಾರತದಲ್ಲಿ 22 ಲಕ್ಷ ಚಾಲಕರ ಕೊರತೆಯಿದೆ ಎಂದು ಅವರು ಹೇಳಿದರು. ದೇಶದಲ್ಲಿ ಸೂಕ್ತ ಚಾಲನಾ ತರಬೇತಿ ಸೌಲಭ್ಯಗಳ ಕೊರತೆಯೂ ಇದೆ. ಇದು ಅನೇಕ ಅಪಘಾತಗಳು ಮತ್ತು ಸಾವುಗಳಿಗೆ ಕಾರಣವಾಗಿದೆ ಎಂದು ಸಾರಿಗೆ ಸಚಿವರು ತಿಳಿಸಿದರು.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ದೇಶಾದ್ಯಂತ ಚಾಲನಾ ತರಬೇತಿ ಸಂಸ್ಥೆಗಳನ್ನು ಹಂತ ಹಂತವಾಗಿ ಸ್ಥಾಪಿಸಲು 4,500 ಕೋಟಿ ರೂ.ಗಳ ಯೋಜನೆ ಆರಂಭಿಸಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಂತಹ 1,600 ಸಂಸ್ಥೆಗಳನ್ನು ಸ್ಥಾಪಿಸಲಾಗುವುದು. ಇದರಿಂದ 60 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಗಡ್ಕರಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!