ಪಿಎಂ ಮೋದಿಯ ಅಭಿನಂದನೆಗೆ ಪಾಕ್ ನೂತನ ಪ್ರಧಾನಿ ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಪಾಕಿಸ್ತಾನದ ನೂತನ ಪ್ರಧಾನಿ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸಿರುವ ಶೆಹಬಾಜ್ ಷರೀಫ್ ಅವರು, ತಮ್ಮ ದೇಶವು ಭಾರತದೊಂದಿಗೆ ಶಾಂತಿಯುತ ಮತ್ತು ಸಹಕಾರಿ ಬಾಂಧವ್ಯವನ್ನು ಬಯಸುತ್ತದೆ ಎಂದು ಹೇಳಿದ್ದಾರೆ.
ಸೋಮವಾರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಷರೀಫ್ ಅವರನ್ನು ಅಭಿನಂದಿಸಿದ ಮೋದಿ, ‘ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ, ಇದರಿಂದ ನಾವು ನಮ್ಮ ಅಭಿವೃದ್ಧಿ ಸವಾಲುಗಳ ಮೇಲೆ ಕೇಂದ್ರೀಕರಿಸಬಹುದು ಮತ್ತು ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು’ ಎಂದಿದ್ದರು.
ಪ್ರತಿಕ್ರಿಯೆ ನೀಡಿದ ಷರೀಫ್ ‘ಪಾಕಿಸ್ತಾನವು ಭಾರತದೊಂದಿಗೆ ಶಾಂತಿಯುತ ಮತ್ತು ಸಹಕಾರಿ ಬಾಂಧವ್ಯವನ್ನು ಬಯಸುತ್ತದೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಬಾಕಿ ಉಳಿದಿರುವ ವಿವಾದಗಳ ಶಾಂತಿಯುತ ಇತ್ಯರ್ಥವು ಅನಿವಾರ್ಯ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ತ್ಯಾಗಗಳು ಎಲ್ಲರಿಗೂ ತಿಳಿದಿವೆ. ಶಾಂತಿಯನ್ನು ಭದ್ರಪಡಿಸೋಣ ಮತ್ತು ನಮ್ಮ ಜನರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯತ್ತ ಗಮನ ಹರಿಸೋಣ’ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!