ಶಾಂತಿ ಮಾತುಕತೆ ನಡೆಸಿ ಎಂದ ಪ್ರಧಾನಿ ಮೋದಿ ಕರೆಗೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪ್ರಧಾನಿ ಮೋದಿಯವರ ಶಾಂತಿ ಮಾತುಕತೆಯ ಕರೆಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಪ್ರತಿಕ್ರಿಯೆ ನೀಡಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಮೋದಿ ಮಂಗಳವಾರ ಉಕ್ರೇನ್ ಅಧ್ಯಕ್ಷರೊಂದಿಗೆ ದೂರವಾಣಿ ಕರೆ ಮೂಲಕ ಸಂಭಾಷಣೆ ನಡೆಸಿ, ರಷ್ಯಾ-ಉಕ್ರೇನ್ ಯುದ್ಧದಲ್ಲಿ ಉಪಯೋಗಿಸಲ್ಪಡುವ ಪರಮಾಣುವಿನಿಂದ ಪರಿಸರಕ್ಕೆ ಅಪಾಯಯವಾಗುವ ಸಾಧ್ಯತೆಯಿದೆ ಹಾಗೂ ಅವುಗಳಿಂದ ಭವಿಷ್ಯದಲ್ಲಿ ದುರಂತ ಪರಿಣಾಮಗಳನ್ನು ಎದುರಿಸಬೇಕಾದೀತು. ಹಾಗಾಗಿ ಶಾಂತಿ ಮಾತುಕತೆ ನಡೆಸಲು ಮೋದಿ ಕರೆ ನೀಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲುಹಾನ್ಸ್ಕ್, ಡೊನೆಟ್ಸ್ಕ್, ಜಪೋರಿಝಿಯಾ ಮತ್ತು ಖೆರ್ಸನ್, ಉಕ್ರೇನಿಯನ್ ಪ್ರದೇಶಗಳನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳುವ ಗುರಿಯೊಂದಿಗೆ ಯುದ್ಧ ಪ್ರಾರಂಭಿಸಿದವರು ರಷ್ಯಾದವರು. ಯುದ್ಧ ಪ್ರಾರಂಭಿಸಿರುವ ಅವರೇ ಯುದ್ಧವನ್ನು ನಿಲ್ಲಿಸಲಿ ಎಂದಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಉಕ್ರೇನ್ ರಷ್ಯಾದ ಒಕ್ಕೂಟದ ಪ್ರಸ್ತುತ ಅಧ್ಯಕ್ಷರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ . ಉಕ್ರೇನ್​ ಯಾವಾಗಲೂ ಸಂವಾದದ ಮೂಲಕ ಶಾಂತಿಯುತ ಇತ್ಯರ್ಥಕ್ಕೆ ಬದ್ಧವಾಗಿದೆ. ಇದಲ್ಲದೆ ಯುಎನ್​ ಜನರಲ್​ ಅಸೆಂಬ್ಲಿಯ ಅಧಿವೇಶನದಲ್ಲಿ ನನ್ನ ಭಾಷಣದ ಸಮಯದಲ್ಲಿ ಶಾಂತಿಗಾಗಿ ನಮ್ಮ ಸ್ಪಷ್ಟ ಸೂತ್ರವನ್ನು ವಿವರಿಸಿದೆ. ಅದನ್ನು ಸಾಧಿಸಲು ನಮ್ಮ ಪಾಲುದಾರರೊಂದಿಗೆ ಒಟ್ಟಾಗಿ ಕೆಲಸ ಮಾಡಲು ನಾವು ಸಿದ್ಧರಿದ್ದೇವೆ. ಆದರೆ ರಷ್ಯಾ ಯಾವುದೇ ಮಾತುಕತೆಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಭಾರತದ ಬೆಂಬಲಕ್ಕಾಗಿ ಝೆಲೆನ್ಸ್ಕಿ ಅವರು ಪ್ರಧಾನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!