March 27, 2026
Friday, March 27, 2026
spot_img

ಪದೇ ಪದೇ ದೆಹಲಿ ಪ್ರವಾಸ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ನನ್ನ ಯಾವಾಗ ಕರೆಯುತ್ತಾರೋ ಆಗೆಲ್ಲಾ ದೆಹಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ‘ಮುಂದಿನ ವಾರ ದೆಹಲಿಗೆ ಹೋಗುತ್ತೀರಾ’ ಎಂದು ಕೇಳಿದಾಗ ಪ್ರತಿಕ್ರಿಯಿಸಿದ ಅವರು, ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೆ ಮತ್ಯಾರು ಹೋಗುತ್ತಾರೆ? ಎಂದರು.

ಅಸ್ಸಾಂಗೆ ತೆರಳಿದ್ದಾಗ ಪ್ರಿಯಾಂಕ ಗಾಂಧಿ ಅವರ ಜೊತೆ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಯಿತಾ ಎಂಬ ಒರಶ್ನೆಗೆ ಉತ್ತರಿಸುತ್ತಾ, ನಾನು ರಾಜ್ಯ ರಾಜಕೀಯದ ಬಗ್ಗೆ ಹಂಗೆಲ್ಲ, ಎಲ್ಲೆಂದರಲ್ಲಿ ಚರ್ಚೆ ಮಾಡುವುದಿಲ್ಲ. ಅದು ಸಾರ್ವಜನಿಕವಾಗಿ ಚರ್ಚಿಸುವ ವಿಚಾರವೂ ಅಲ್ಲ ಎಂದರು.

ರಾಹುಲ್ ಗಾಂಧಿ ಅವರು ದೇಶದ ಹಿತಕ್ಕಾಗಿ ಏನು ಬೇಕೋ ಅದನ್ನು ಮಾಡುತ್ತಾರೆ, ಅಮೆರಿಕದ ಜತೆಗಿನ ತೆರಿಗೆ ಒಪ್ಪಂದದಿಂದ ದೇಶದ ಪ್ರತಿ ರೈತನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಚರ್ಚೆ ಮಾಡುತ್ತಾರೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !