ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸದಸ್ಯರು ದೇಶದ್ರೋಹದ ಘೋಷಣೆಗಳನ್ನು ಕೂಗಿದ್ದಾರೆ. ಈ ಬಗ್ಗೆ ರಾಹುಲ್ ಗಾಂಧಿ ಏನು ಹೇಳುತ್ತಾರೆ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಕೇಳಿದ್ದಾರೆ.
ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಸಂಸತ್ ಭವನದಲ್ಲಿ ಸ್ವತಂತ್ರ ರಾಷ್ಟ್ರದ ಕೂಗನ್ನು ಎತ್ತಿದರು. ಈಗ, ನಾಸಿರ್ ಹುಸೇನ್ ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದಾಗ, ಅವರ ಬೆಂಬಲಿಗರು “ಪಾಕಿಸ್ತಾನ್ ಜಿಂದಾಬಾದ್” ಎಂದು ಘೋಷಣೆ ಕೂಗಿದ್ದಾರೆ. ಇಂತಹ ದೇಶದ್ರೋಹಿ ಕ್ರಮಗಳ ಬಗ್ಗೆ ಕೆಪಿಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಏನು ಹೇಳುತ್ತಾರೆ? ಎಂದು ಸಚಿವ ಜೋಶಿ ಪ್ರಶ್ನಿಸಿದರು.
ರಾಜ್ಯಸಭಾ ಚುನಾವಣೆಯಲ್ಲಿ ಮುಸ್ಲಿಂ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಕರ್ನಾಟಕ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗುವುದು ಸಾಮಾನ್ಯ ಸಂಗತಿಯೇನಲ್ಲ. ಈ ವಿಷಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಜೋಶಿ ಹೇಳಿದ್ದಾರೆ.