ಇಡಿ ಬಿಡುಗಡೆ ಮಾಡಿರುವುದು ತನಿಖಾ ವರದಿಯಲ್ಲ, ಜಪ್ತಿ ಮಾಹಿತಿಯಷ್ಟೇ: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಬಿಡುಗಡೆ ಮಾಡಿರುವುದು ತನಿಖಾ ವರದಿಯಲ್ಲ. ಜಪ್ತಿ ವರದಿಯಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಅಕ್ರಮ ವಹಿವಾಟು ಪ್ರಶ್ನೆ ಈ ಪ್ರಕರಣದಲ್ಲಿ ಎಲ್ಲಿ ಬರುತ್ತದೆ? ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಇಡಿ ಕೊಟ್ಟಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅದರರ್ಥ ಕಾನೂನು ಪ್ರಕಾರ ಇಲ್ಲ ಎಂಬುದು ತಾನೆ? ಇಲ್ಲದಿದ್ದರೆ ನ್ಯಾಯಾಲಯವೇಕೆ ತಡೆಯಾಜ್ಞೆ ಕೊಡುತ್ತಿತ್ತು?’ ನನ್ನ ಹೆಸರನ್ನು ಕೆಡಿಸಲು ಇಷ್ಟೆಲ್ಲ ಪ್ರಯತ್ನಗಳು ನಡೆಯುತ್ತಿವೆ. ಇಡಿ ಬಿಡುಗಡೆ ಮಾಡಿದ್ದು ತನಿಖಾ ವರದಿಯಲ್ಲ, ಕೇವಲ ಜಪ್ತಿ ವರದಿ ಎಂದು ಹೇಳಿದರು.

ಇಡಿ ತನಿಖೆ ರಾಜಕೀಯ ಪ್ರೇರಿತ ಎಂಬುದು ಎಲ್ಲರಿಗೂ ಗೊತ್ತಿದೆ. ನನ್ನ ವಿಚಾರದಲ್ಲಿ ಮಾತನಾಡಲು ಇವರಿಗೆ ಏನೂ ಸಿಕ್ಕಿಲ್ಲ. ಈ ವಿಚಾರ ಇಟ್ಟುಕೊಂಡು ನನ್ನ ಹೆಸರಿಗೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಅದರಲ್ಲಿ ಬಿಜೆಪಿ ಯಶಸ್ವಿಯಾಗುವುದಿಲ್ಲ. ಮುಡಾ ವಿಚಾರದಲ್ಲಿ ನಮ್ಮ ಕುಟುಂಬದವರು ಯಾವ ತಪ್ಪು ಮಾಡಿಲ್ಲ ಎಂದು ತಿಳಿಸಿದರು.

ಸಿಎಂ ಬದಲಾವಣೆ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ನನಗೆ ಮತ್ತೆ ಮತ್ತೆ ಅದನ್ನೇ ಕೇಳಬೇಡಿ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದೇ ಆಗುತ್ತದೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ವಿಚಾರದ ಬಗ್ಗೆ ನಾನು ಎಷ್ಟು ಬಾರಿ ಸ್ಪಷ್ಟೀಕರಣ ಕೊಡಲಿ ಹೇಳಿ? ಖಾರವಾಗಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!