ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಮೂರು ಕ್ಷೇತ್ರಗಳ ಬೈ ಎಲೆಕ್ಷನ್ ನ ಫಲಿತಾಂಶ ನವೆಂಬರ್ 23ಕ್ಕೆ ಪ್ರಕಟ ಆಗಲಿದೆ. ಈಗಾಗಲೇ ಬೈ ಎಲೆಕ್ಷನ್ ಫಲಿತಾಂಶದ ಬಗ್ಗೆ ಕುತೂಹಲ ಸೃಷ್ಟಿಯಾಗಿದ್ದು, ರಾಜಕೀಯ ಪಕ್ಷಗಳ ಪಡಸಾಲೆಯಲ್ಲಿ ನಾನಾ ಲೆಕ್ಕಾಚಾರ ಶುರುವಾಗಿದೆ. ಇದರ ಮಧ್ಯ ಇದೀಗ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಪಿಮಾರ್ಕ್ ಸಮೀಕ್ಷೆ ಪ್ರಕಾರ ಮೂರು ಕ್ಷೇತ್ರಗಳ ಪೈಕಿ ಎನ್ಡಿಎ 2 ಹಾಗೂ ಕಾಂಗ್ರೆಸ್ 1 ಸ್ಥಾನ ಗೆಲ್ಲಲಿದೆ. ಈ ಮೂಲಕ ಚನ್ನಪಟ್ಟಣ ಹಾಗೂ ಶಿಗ್ಗಾಂವಿಯನ್ನು ಜೆಡಿಎಸ್ ಮತ್ತು ಬಿಜೆಪಿ ವಶಪಡಿಸಿಕೊಳ್ವುಳುವ ಸಾಧ್ಯತೆಗಳಿವೆ. ಇನ್ನು ಸಂಡೂರು ಕ್ಷೇತ್ರವನ್ನು ಕೈವಶವಾಗುವ ಸಾಧ್ಯತೆಗಳಿವೆ.
ಆಡಳಿತರೂಢ ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿದ್ದರೆ, ಇತ್ತ ಬಿಜೆಪಿ – ಜೆಡಿಎಸ್ ಮೈತ್ರಿ ಕೂಡ ಮೂರು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ ಎಂದು ಹೇಳುತ್ತಿದೆ. ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಗೆಲ್ಲುವುದು ಪಕ್ಕಾ. ಇನ್ನು ಸಂಡೂರಿನಲ್ಲಿ ಈ ಬಾರಿ ಹೊಸ ಬದಲಾವಣೆ ಬಯಸಿ ಜನ ಎನ್ಡಿಎಗೆ ಆಶೀರ್ವಾದ ಮಾಡಿದ್ದಾರೆ ಎನ್ನುವ ವಿಶ್ವಾಸದಲ್ಲಿ ಬಿಜೆಪಿ ನಾಯಕರು ಇದ್ದಾರೆ.