August 13, 2026
Thursday, August 13, 2026
spot_img

ಸೋಲಿನ ಬಳಿಕ ದೀದಿಗೆ ಏನಾಯಿತು: ಮೂವರು ವಕ್ತಾರರನ್ನು ಅಮಾನತು ಮಾಡಿದ TMC

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಆಂತರಿಕ ಅಸಮಾಧಾನ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಇದೀಗ ಪಕ್ಷ ಶಿಸ್ತು ಕ್ರಮಕ್ಕೆ ಮುಂದಾಗಿದೆ. ಪಕ್ಷದ ನಾಯಕತ್ವ ಮತ್ತು ಚುನಾವಣಾ ತಂತ್ರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಮೂವರು ವಕ್ತಾರರನ್ನು ದೀರ್ಘಾವಧಿಗೆ ಅಮಾನತುಗೊಳಿಸಲಾಗಿದೆ.

ಪಕ್ಷದ ನಿರ್ಧಾರದಂತೆ, ಕೊಹಿನೂರ್ ಮಜುಂದಾರ್, ರಿಜು ದತ್ತ ಹಾಗೂ ಕಾರ್ತಿಕ್ ಘೋಷ್ ಅವರನ್ನು ಆರು ವರ್ಷಗಳ ಕಾಲ ಅಮಾನತು ಮಾಡಲಾಗಿದೆ. ಪಕ್ಷದ ಶಿಸ್ತು ಉಲ್ಲಂಘನೆ ಹಾಗೂ ಬಹಿರಂಗ ಹೇಳಿಕೆಗಳ ಮೂಲಕ ಸಂಘಟನೆಯ ಇಮೇಜ್‌ಗೆ ಧಕ್ಕೆ ತಂದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿದರೆ, ತೃಣಮೂಲ ಕಾಂಗ್ರೆಸ್ ನಿರೀಕ್ಷೆಗೂ ಮೀರಿ ಹಿನ್ನಡೆ ಅನುಭವಿಸಿದೆ. ಈ ಸೋಲಿನ ಬಳಿಕ ಪಕ್ಷದ ಒಳಗಿನಿಂದಲೇ ನಾಯಕತ್ವದ ವಿರುದ್ಧ ಟೀಕೆಗಳು ಕೇಳಿಬಂದಿದ್ದವು.

ಪಕ್ಷದ ಶಿಸ್ತು ಸಮಿತಿ ನೋಟಿಸ್ ಜಾರಿಗೊಳಿಸಿದ ಕೆಲವೇ ದಿನಗಳಲ್ಲಿ ಅಮಾನತು ಕ್ರಮ ಜಾರಿಯಾಗಿದೆ. ಇದರಿಂದ ಚುನಾವಣಾ ಸೋಲಿನ ಬಳಿಕ ಟಿಎಂಸಿಯಲ್ಲಿ ಆಂತರಿಕ ಭಿನ್ನಮತ ಮತ್ತಷ್ಟು ಬಯಲಿಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಕ್ಷ ಈ ಅಸಮಾಧಾನವನ್ನು ಹೇಗೆ ನಿಭಾಯಿಸುತ್ತದೆ ಎಂಬುದರ ಮೇಲೆ ರಾಜಕೀಯ ವಲಯದ ಕಣ್ಣು ನೆಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !