ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈತುಂಬಾ ಬೆಂಕಿ ಹೊತ್ತಿಸಿಕೊಂಡು ಎಂಜಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಓಡಾಡಿದ್ದು, ಜನ ಆತಂಕ ವ್ಯಕ್ತಪಡಿಸಿದ್ದಾರೆ.
ಅನಿಲ್ ಕುಂಬ್ಳೆ ಜಂಕ್ಷನ್ ಬಳಿ ನಡೆದ ಘಟನೆ ನಡೆದಿದೆ. ಬಸ್ ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಂಡತೆ ಎಚ್ಚೆತ್ತ ನಿರ್ವಾಹಕ ಅವರನ್ನು ಕೆಳಕ್ಕಿಳಿಸಿದ್ದಾರೆ. ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.
ಈ ಘಟನೆಯಿಂದಾಗಿ, ಎಂಜಿ ರಸ್ತೆಯ ಸದಾ ದಟ್ಟ ವಾಹನನಿಬಿಡ ಸ್ಥಳವಾದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಟ್ರಾಫಿಕ್ ಅಸ್ತವ್ಯಸ್ತವಾಯಿತು. ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್‌ನಿಂದ ಮೇಲೆದ್ದ ಭಾರಿ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತು.