ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಸದಾಶಿವನಗರದ ಆರ್ಎಂವಿ ಸೆಕೆಂಡ್ ಸ್ಟೇಜ್ ಟೆಂಪಲ್ ರಸ್ತೆಯಲ್ಲಿ ವಾಸವಿದ್ದ ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ನೇಣಿಗೆ ಶರಣಾಗಿದ್ದಾರೆ.
ಅನೂಪ್ ಕುಮಾರ್ (38), ಪತ್ನಿ ರಾಖಿ (35) ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ಐದು ವರ್ಷದ ವಿಶೇಷ ಚೇತನ ಹೆಣ್ಣು ಮಗು ಮತ್ತು ಎರಡು ವರ್ಷದ ಗಂಡು ಮಗುವಿಗೆ ದಂಪತಿ ವಿಷ ಕುಡಿಸಿ, ಬಳಿಕ ತಾವು ನೇಣಿಗೆ ಶರಣಾಗಿದ್ದಾರೆ. ಇಬ್ಬರೂ ಟೆಕ್ಕಿಗಳಾಗಿದ್ದು ವರ್ಕ್ ಫ್ರಂ ಹೋಮ್ ಮಾಡುತಿದ್ದರು ಎಂದು ತಿಳಿದುಬಂದಿದೆ.
ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸದ್ಯದ ಮಾಹಿತಿ ಪ್ರಕಾರ ಮೃತರು ಮೂಲತಃ ಉತ್ತರಪ್ರದೇಶದ ಅಲಹಾಬಾದ್ನವರು ಎಂದು ತಿಳಿದುಬಂದಿದೆ. ಕಳೆದ ಎರಡು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಮೃತ ಅನೂಪ್ ಕುಮಾರ್ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.