Wednesday, July 6, 2022

Latest Posts

ಐದು ನಿಮಿಷದ ಅಂತರದಲ್ಲಿ ಎರಡು ಡೋಸ್ ಲಸಿಕೆ ಪಡೆದವರಿಗೆ ಏನಾಯ್ತು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಲಸಿಕೆಯ ಎರಡು ಡೋಸ್‌ಗಳ ನಡುವೆ ಅಂತರ ಇರಲೇಬೇಕು. ಆದರೆ ಉತ್ತರಪ್ರದೇಶದ ಲಲಿತಪುರ ಜಿಲ್ಲೆಯ ರಾವರ್ಪುರದ ನರ್ಸಿಂಗ್ ಹೋಂನಲ್ಲಿ ಎರಡು ಡೋಸ್ ಲಸಿಕೆ ಒಟ್ಟಿಗೇ ನೀಡಿದ್ದಾರೆ.
ಎಲ್ಲಿಯೋ ಮಾತನಾಡುತ್ತಾ ಐದು ನಿಮಿಷದ ಅಂತರದಲ್ಲಿ ಒಂದೇ ವ್ಯಕ್ತಿಗೆ ಎರಡು ಡೋಸ್ ಲಸಿಕೆ ನೀಡಿದ್ದಾರೆ ಎಂದು ಕುಟುಂಬಸ್ತರು ಆರೋಪಿಸಿದ್ದಾರೆ.
ಲಸಿಕೆ ಹಾಕಿಸಿಕೊಂಡು ಮನೆಗೆ ಬಂದ ಕೆಲ ಸಮಯದಲ್ಲಿ ಆರೋಗ್ಯದಲ್ಲಿ ಏರುಪೇರಾಗಿದ್ದು, ನಂತರ ಎರಡು ಡೋಸ್ ಪಡೆದಿರುವ ವಿಷಯ ತಿಳಿದಿದೆ.
ಲಸಿಕೆ ಎರಡು ಬಾರಿ ಹಾಕುತ್ತಾರೆ ಎಂದು ತಿಳಿದುಕೊಂಡಿದ್ದೆ. ಆದರೆ ಇದರಿಂದ ಆರೋಗ್ಯವೇ ಹದಗೆಟ್ಟಿದೆ ಎಂದು ಎರಡು ಡೋಸ್ ಪಡೆದವರು ತಿಳಿಸಿದ್ದಾರೆ. ಕೂಡಲೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಗೆ ದೂರು ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss