ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದಲ್ಲಿ ಯುವಕನೊಬ್ಬ ವಧುವಂತೆ ಸಿಂಗರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸಿವಿಲ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಯುವಕ ಪುನೀತ್ ದುಬೆ ಇಂದೋರ್‌ನ ಹಾಸ್ಟೆಲ್ ಕೊಠಡಿಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾನೆ.
ಯುವಕ ಕೈಗಳಿಗೆ ಹಸಿರು ಬಳೆಗಳನ್ನು ತೊಟ್ಟು, ಮದುವನಗಿತ್ತಿಯಂತೆ ಸಿಂಗಾರಗೊಂಡು ಹಾಸ್ಟೆಲ್ನ ತನ್ನ ಕೊಠಡಿಯಲ್ಲಿರುವ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾನೆ. ಯುವಕನ ಮೃತದೇಹ ಕಂಡ ಪೋಷಕರು ಇದು ಕೊಲೆ ಎನ್ನುವ ಶಂಕೆ ವ್ಯಕ್ತಪಡಿಸಿದ್ದಾರೆ. ನೇಣು ಬಿಗಿದುಕೊಂಡ ಜಾಗದಲ್ಲಿ ರಕ್ತದ ಕಲೆಗಳಿದ್ದು ಇದು ಕೊಲೆಯೋ ಎನ್ನುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.