ರೈತರಿಗೆ ಏನು ಅನುಕೂಲ ಮಾಡಿಲ್ಲ, ಮಣ್ಣಿನ ಮಕ್ಕಳು ಅಂತಾರೆ: ಯಾರ ಮೇಲೆ ಸಿಎಂ ಕೋಪ?!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೈತರಿಗೆ ಏನೂ ಅನುಕೂಲ ಮಾಡದೇ ಮಣ್ಣಿನ ಮಕ್ಕಳು ಅಂತಾರೆ ಎಂದು ಸಿದ್ದರಾಮಯ್ಯ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಹಾಲಿನ ಬೆಲೆ ಏರಿಕೆ ಸಂಬಂಧಪಟ್ಟಂತೆ ಬಿಜೆಪಿ-ಜೆಡಿಎಸ್ ಆರೋಪಿಸಿರುವ ಕುರಿತು ಮಾತನಾಡಿದರು.

ಹಾಲಿಗೆ 5 ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಕೆಲವರು ಏನೂ ಮಾಡದೇ ರೈತರ ಮಕ್ಕಳು, ಮಣ್ಣಿನ ಮಕ್ಕಳು ಎನ್ನುತ್ತಾರೆ ಎಂದು ಟೀಕಿಸಿದ್ದಾರೆ.

 

- Advertisement - Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!