ಹೊಸದಿಗಂತ ವರದಿ, ಮೈಸೂರು:
ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ನಾಲ್ವರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲಿ ನಡೆದಿದೆ.
ಅರ್ಬಾಜ್ ಖಾನ್(೧೮) ಕೊಲೆಯಾದ ಯುವಕ. ಶಾದಿಲ್, ಶಹಬಾಜ್, ಶೋಯಬ್, ಸಾಹಿಲ್ ಕೊಲೆ ಮಾಡಿದ ಆರೋಪಿಗಳು.
ಶಾಂತಿನಗರದ ಲಾಲ್ ಮಸೀದಿ ಬಳಿ ಅರ್ಬಾಜ್ ಖಾನ್ ಗುರಾಯಿಸಿ ನೋಡಿದ್ದಾನೆ ಎನ್ನಲಾಗಿದೆ. ಈ ವಿಚಾರದಲ್ಲಿ ಗಲಾಟೆ ಶುರುವಾಗಿದ್ದು ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಮಾರಕಾಸ್ತ್ರಗಳಿಂದ ಅರ್ಬಾಜ್ ಖಾನ್ ನನ್ನ ನಾಲ್ವರು ಹತ್ಯೆಗೈದಿದ್ದಾರೆ. ಗಲಾಟೆಯಲ್ಲಿ ಆರೋಪಿ ಶಹಬಾಜ್‌ಗೂ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.