ಮೀಸಲಾತಿ ಹೆಚ್ಚಳದ ನಿರ್ಧಾರ ಕುರಿತು ಕಾಂಗ್ರೆಸ್‌ ನಿಲುವೇನು? ಸಿಎಂ ಪ್ರಶ್ನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಬಿಜೆಪಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ಹಾಗೂ ಒಳ ಮೀಸಲಾತಿ ಕಲ್ಪಿಸಿರುವ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ನೆಹರೂ ಮೈದಾನದಲ್ಲಿ ರಾಜ್ಯ ಪರಿಶಿಷ್ಟ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಿ ಹಾಗೂ ಒಳ ಮೀಸಲಾತಿ ನೀಡಿದರಿಂದ ಕೃತಜ್ಞತೆ ಗಾಗಿ ಏರ್ಪಡಿಸಿದ್ದ ಅಭಿನಂದನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಬಿಜೆಪಿ ಸರ್ಕಾರದ ನಿಲುವಿನ‌ ಪರವಾಗಿ ಇದ್ದಾರೆಯೋ ಅಥವಾ ವಿರುದ್ಧವಾಗಿ ಇದ್ದಾರೆಯೋ ಎಂಬುದನ್ನು ಕಾಂಗ್ರೆಸ್ಸಿಗರು ಹೇಳಬೇಕು. ದಲಿತ ಬಂಧುಗಳಿಗೆ ಕಾಂಗ್ರೆಸ್ ನಿಲುವು ಗೊತ್ತಾಗಬೇಕು ಎಂದು ಹೇಳಿದರು.

ಚುನಾವಣೆ ಬರುತ್ತೀರುವುದರಿಂದ ಈಗಲೂ ಸುಳ್ಳು ಭರವಸೆ ನೀಡಿ ದಾರಿ ತಪ್ಪಿಸುವ ಕಾರ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಆದರಿಂದ‌ ನೀವೂ ಎಚ್ಚೆತ್ತುಕೊಳ್ಳಬೇಕು ಎಂದು ಭಾಷಣದೂದ್ದಕ್ಕೂ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ‌ ಎಲ್ಲ ನಾಯಕರಿಗೂ ಸನ್ಮಾನಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!