Exit Polls ಕುರಿತು ಡಿಕೆ ಶಿವಕುಮಾರ್ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ವಿಧಾನಸಭೆ ಚುನಾವಣೆ 2023 (Karnataka Assembly Elections) ಮುಕ್ತಾಯಗೊಂಡಿದ್ದು, ಇದರ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು (Exit Polls 2023) ಹೊರಬಿದ್ದಿದ್ದು, ಕೆಲವು ಸಮೀಕ್ಷೆಗಳು ಕಾಂಗ್ರೆಸ್ (Congress) ಅಧಿಕಾರಕ್ಕೆ ಬರಬಹುದು ಸಾಧ್ಯತೆ ಇದೆ ಎಂದು ತಿಳಿಸಿದರೆ, ಇನ್ನು ಕೆಲವು ಸಮೀಕ್ಷೆಗಳ ಪ್ರಕಾರ ಬಿಜೆಪಿ (BJP) ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ. ಕೆಲವೊಂದು ಸಮೀಕ್ಷೆಗಳು ಅತಂತ್ರ ತೋರಿಸಿವೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಈ ಸಲ ಬದಲಾವಣೆ ಗಾಳಿ ಬೀಸಿದೆ. ಗ್ರೌಂಡ್ ರಿಪೋರ್ಟ್‌ ಲಭ್ಯವಾಗಿದೆ, ಕಾಂಗ್ರೆಸ್‌ಗೆ ಬಹುಮತ ಸಿಗಲಿದೆ. ಯಾವುದೇ ಅನುಮಾನ ಬೇಡ ಡಬಲ್ ಇಂಜಿನ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಆಗಿಲ್ಲ. ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಬೆಲೆ ಏರಿಕೆಯಿಂದ ರಾಜ್ಯದ ಜನ ತತ್ತರಿಸಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!