ಹೊಸದಿಗಂತ ಡಿಜಿಟಲ್ ಡೆಸ್ಕ್:
ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದು ಧೃಡವಾಗಿದೆ. ಇನ್‌ಸ್ಟಾಗ್ರಾಮ್ ಸಂಸ್ಥೆ ಪೊಲೀಸರಿಗೆ ವರದಿ ಮಾಡಿದ್ದು, ರೇಣುಕಾಸ್ವಾಮಿ ಅವರು ಪವಿತ್ರ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿರುವುದು ನಿಜ ಎಂದು ತಿಳಿಸಿದ್ದಾರೆ.
ಕಾಮಾಕ್ಷಿಪಾಳ್ಯ ಪೊಲೀಸರು ಇನ್‌ಸ್ಟಾಗ್ರಾಮ್ ಏಜೆನ್ಸಿಗೆ ಮಾಹಿತಿಗಾಗಿ ವಿನಂತಿಯನ್ನು ಕಳುಹಿಸಿದ್ದರು. ಇನ್‌ಸ್ಟಾಗ್ರಾಮ್ ಸಂಸ್ಥೆ ಪ್ರತಿಕ್ರಿಯಿಸಿದ್ದು, ಪವಿತ್ರ ಗೌಡ ಅವರಿಗೆ ರೇಣುಕಾಸಮಾಮಿ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿರುವುದು ನಿಜ ಎಂದು ಪೊಲೀಸರಿಗೆ ತಿಳಿಸಿದೆ.
ರೇಣುಕಾಸ್ವಾಮಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ರೇಣುಕಾಸಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಪ್ರಮುಖ ಆರೋಪಿಯಾಗಿದ್ದು, ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.