ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರನೇ ಸ್ಥಾನದಲ್ಲಿದ್ದಾರೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ನ್ಯಾಷನಲ್ ಎಲೆಕ್ಷನ್ ಮಾನಿಟರಿಂಗ್ ಗ್ರೂಪ್ ತನಿಖೆ ನಡೆಸಿ ವರದಿಯನ್ನು ಬಿಡುಗಡೆ ಮಾಡಿದೆ.
ವರದಿ ಪ್ರಕಾರ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅತ್ಯಂತ ಶ್ರೀಮಂತ ಸಿಎಂ ಆಗಿದ್ದರೆ, ಅರುಣಾಚಲ ಪ್ರದೇಶದ ಪೆಮಾ ಖಂಡು ಎರಡನೇ ಶ್ರೀಮಂತ ಸಿಎಂ ಆಗಿದ್ದಾರೆ.
ಆಂಧ್ರ ಸಿಎಂ 931 ಕೋಟಿ ಹಾಗೂ ಅರುಣಾಚಲ ಪ್ರದೇಶದ ಸಿಎಂ 332 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. 3ನೇ ಸ್ಥಾನದಲ್ಲಿರುವ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರ ಬಳಿ 51 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ.