ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಬಿಎಂಪಿ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರಿಗೆ ಏನು ಕೆಲಸ.? ಇದೀಗ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ ರೊಂದು ಫೋಟೋ.
ಹೌದು, ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಸಿಎಂ, ಡಿಸಿಎಂ ಜೊತೆ ಬಿಬಿಎಂಪಿ ಉನ್ನತ ಅಧಿಕಾರಿ ಸಭೆ ನಡೆದಿತ್ತು. ಇದರಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕೂಡ ಭಾಗವಹಿಸಿದ್ದರು. ಇದೀಗ ಈ ಕುರಿತು ಬಿಜೆಪಿ ಪ್ರಶ್ನೆ ಎತ್ತಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ‘ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಎಟಿಎಂ ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ರಾಜ್ಯ ಸರಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರಿಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ..? ಇದು 85% ಡೀಲ್ ಫಿಕ್ಸಿಂಗ್ ಸಭೆಯೇ..? ಉತ್ತರಿಸಿ ಮಾನ್ಯ ಸಿದ್ದರಾಮಯ್ಯ ಅವರೇ ಹಾಗೂ ಡಿ.ಕೆ. ಶಿವಕುಮಾರ್ ಅವರೇ’ ಎಂದು ಟ್ವೀಟ್ ಮಾಡಿದೆ.
https://twitter.com/BJP4Karnataka/status/1668580375428251648?cxt=HHwWgIC2ydnA_qcuAAAA
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಈ ಕುರಿತು ಟ್ವೀಟ್ ಮಾಡಿದ್ದಾರೆ. ‘ಇದು ಯಾವ ಸಭೆ? ಕಾಂಗ್ರೆಸ್ ಪಕ್ಷದ ಉಸ್ತುವಾರಿ ನಡೆಸುವ ಸಭೆಯಲ್ಲಿ ಕರ್ನಾಟಕದ ಐಎಎಸ್ ಅಧಿಕಾರಿಗಳಿಗೆ ಏನು ಕೆಲಸ? ಬಿಬಿಎಂಪಿ ಚುನಾವಣೆಗೆ ಸಂಗ್ರಹ ಮಾಡಲು ಸೂಚಿಸಿದ್ದಾರೆಯೇ? ಬಿಬಿಎಂಪಿ ವಾರ್ಡ್ ಮರುವಿಂಗಡಣೆಯನ್ನು ಸುರ್ಜೆವಾಲರವರ ನೇತೃತ್ವದಲ್ಲಿ ಮಾಡುತ್ತಿದ್ದೀರಾ? ಇಂತಹ ಸಭೆಗಳಲ್ಲಿ ಯಾವ ಅನುಮತಿಯೊಂದಿಗೆ ಈ ಅಧಿಕಾರಿಗಳು ಪಾಲ್ಗೊಂಡಿದ್ದಾರೆಸಿದ್ದರಾಮಯ್ಯ ಅವರೇ?’ ಎಂದಿದ್ದಾರೆ.