April 12, 2026
Sunday, April 12, 2026
spot_img

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಕಾರಣವೇನು?: ಬ್ರೀಚ್ ಕ್ಯಾಂಡಿ ಆಸ್ಪತ್ರೆ ಕೊಟ್ಟ ಮಾಹಿತಿ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ನಿಧನಕ್ಕೆ ಬಹು ಅಂಗಾಂಗ ವೈಫಲ್ಯ ಕಾರಣ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ನಿನ್ನೆಯಷ್ಟೆ ತೀವ್ರ ಉಸಿರಾಟದ ಸಮಸ್ಯೆ ಮತ್ತು ಎದೆನೋವಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ ಪ್ರತೀಕ್ ಸಂಧಾನಿ ಅವರು, ಆಶಾ ಭೋಸ್ಲೆ ಇಂದು ನಿಧನ ದುಃಖಕರ ಸುದ್ದಿ. ಅವರು ಬಹು ವೈದ್ಯಕೀಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಬಹು ಅಂಗಾಂಗ ವೈಫಲ್ಯದಿಂದ ನಿಧನರಾದರು ಎಂದು ಹೇಳಿದರು.

ಸೋಮವಾರ ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !