ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರ್ ಕೊಡ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಗ್ರೇಟರ್ ಬೆಂಗಳೂರು ಅಲ್ಲ. ‘ಲೂಟರ್’ಗಳ ಬೆಂಗಳೂರು ಎಂದು ಅಸಮಾಧಾನ ಹೊರಹಾಕಿದ್ದಾರೆ.
ಗ್ರೇಟರ್ ಬೆಂಗಳೂರು!? ಹೆಚ್ಚು ಮಳೆಯಾದರೆ ಮುಳುಗುತ್ತದೆ! ಕಡಿಮೆ ಸುರಿದರೆ ತೇಲುತ್ತದೆ!. ರಸ್ತೆಗಳಲ್ಲಿಯೇ ಕೆರೆ, ಚರಂಡಿ! ಗುಂಡಿಗೆ ಹಿಡಿ ಮಣ್ಣಾಕುವುದಕ್ಕೂ ಬಿಡಿಗಾಸಿಲ್ಲ. ಸುರಂಗಕ್ಕೆ ಮಾತ್ರ ಸಾವಿರಾರು ಕೋಟಿ ಟೆಂಡರು! ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು ಎಂದು ಸಿಎಂ, ಡಿಸಿಎಂಗೆ ಎಕ್ಸ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.