ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಈ ಸಂಬಂಧ ಚರ್ಚೆ ನಡೆಸಲು ಇಂದು ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿ ಕಾರಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನು ಸೂಚಿಸುತ್ತದೆ? ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ? ಸರ್ಕಾರದ ಅಸಮರ್ಥ್ಯವೇ ಅಥವಾ ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನದ ಬಾಗವೇ? ಸರ್ಕಾರಕ್ಕೆ ವಿಪಕ್ಷಗಳನ್ನು ಎದುರಿಸುವ ಮುಖವಿಲ್ಲವೇ? ಅಥವಾ ಪರಿಸ್ಥಿತಿ ಎದುರಿಸಲಾಗದೆ ಕೈ ಚೆಲ್ಲಿದೆಯೇ? ಇಂತಹ ಮುಖಹೇಡಿ ಸರ್ಕಾರದಿಂದ ಜನರ ಜೀವ ಉಳಿಸುವುದು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯಪಾಲರು ಸರ್ವಪಕ್ಷ ಸಭೆ ಕರೆದಿರುವುದು ಏನು ಸೂಚಿಸುತ್ತದೆ?
ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ?
ಸರ್ಕಾರದ ಅಸಮರ್ಥ್ಯವೇ ಅಥವಾ #BSYmuktaBJP ಅಭಿಯಾನದ ಬಾಗವೇ?
ಸರ್ಕಾರಕ್ಕೆ ವಿಪಕ್ಷಗಳನ್ನು ಎದುರಿಸುವ ಮುಖವಿಲ್ಲವೇ?
ಅಥವಾ ಪರಿಸ್ಥಿತಿ ಎದುರಿಸಲಾಗದೆ ಕೈ ಚೆಲ್ಲಿದೆಯೇ?ಇಂತಹ ಮುಖಹೇಡಿ ಸರ್ಕಾರದಿಂದ ಜನರ ಜೀವ ಉಳಿಸುವುದು ಸಾಧ್ಯವಿಲ್ಲ.
— Karnataka Congress (@INCKarnataka) April 20, 2021