ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುರುಕ್ಷೇತ್ರದ ಕಥೆಯಲ್ಲಿ ಮಗನನ್ನು ಯುದ್ಧ ಭೂಮಿಗೆ ಕಳುಹಿಸಿ ನೀನು ರಣಹೇಡಿ ಆಗಿಬಿಟ್ಟೆ ಎಂದು ಬಭ್ರುವಾಹನ ಹೇಳುತ್ತಾನಲ್ಲ. ಇವತ್ತು ಕುಮಾರಸ್ವಾಮಿಯದ್ದು ಅದೇ ಪರಿಸ್ಥಿತಿ. ತನ್ನ ಮಗನನ್ನೇ ಗೆಲ್ಲಿಸಿಕೊಂಡು ಬರಲಿಲ್ಲ ಅಂದ್ಮೇಲೆ ಕೇಂದ್ರ ಸಚಿವರಾಗಿ ಏನು ಪ್ರಯೋಜನ ಎಂದು ಸಿಪಿ ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಸೋತು ಸುಣ್ಣ ಆಗಿದ್ದಾರೆ. ಕುಮಾರಸ್ವಾಮಿಗೆ ಬಂಡತನ, ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಮಾಡಿರುವ ಅದ್ವಾನ ಸರಿಪಡಿಸಬೇಕು. ಚನ್ನಪಟ್ಟಣ ನಗರ ಸ್ವಚ್ಛ ಮಾಡುವ ಉದ್ದೇಶದಿಂದ ಎಲ್ಲಾ ನಗರಸಭಾ ಸದಸ್ಯರ ಸಭೆ ಕರೆದಿದ್ದೇನೆ. ಬಸ್‌ಸ್ಟ್ಯಾಂಡ್, ಕಸ, ಯುಜಿಡಿ ಸಮಸ್ಯೆ ಇದೆ. ಇವೆಲ್ಲವನ್ನೂ ಮೊದಲು ಬಗೆಹರಿಸಬೇಕು. ಇಂದು ಸಭೆ ನಡೆಸಿ ನಿರಂತರವಾಗಿ ತಾಲೂಕು ಅಭಿವೃದ್ಧಿಗೆ ಮುಂದಾಗುತ್ತೇನೆ ಎಂದರು.