ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ಪೂನಂ ಪಾಂಡೆ ಹಠಾತ್ ಸಾವು ಈಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
32 ವರ್ಷದ ಈ ನಟಿ ಗರ್ಭಕಂಠ ಕ್ಯಾನ್ಸರ್‌ಗೆ ಬಲಿಯಾಗಿದ್ದಾರೆ ಎಂದು ಹೇಳಲಾಗಿದೆಯಾದರೂ, ಸಾವಿನ ಹಿಂದೆ ಬೇರೆ ಕಾರಣಗಳು ಇರಬಹುದು ಎಂಬ ಶಂಕೆ ಈಗ ವ್ಯಕ್ತವಾಗುತ್ತಿದೆ.
ಪೂನಂ ಪಾಂಡೆ ಗರ್ಭಕಂಠ ಕ್ಯಾನ್ಸರ್‌ನಿಂದ ನಿಧನ ಹೊಂದಿದ್ದಾರೆ ಎಂದು ಅವರ ಮ್ಯಾನೇಜರ್ ಹೇಳಿದ್ದಾರೆ. ಆದರೆ ಆಕೆ ಮೂರು ದಿನಗಳ ಹಿಂದಷ್ಟೆ ಪಾರ್ಟಿ ಮಾಡುತ್ತಿರುವ ಚಿತ್ರವನ್ನು ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದಲ್ಲದೆ ನಟಿ, ಈ ಹಿಂದೆ ಎಂದೂ ತಮಗೆ ಕ್ಯಾನ್ಸರ್ ಇರುವುದರ ಬಗ್ಗೆ ಹೇಳಿಕೊಂಡಿರಲಿಲ್ಲ. ಇದೀಗ ಒಮ್ಮೆಲೆ ಕ್ಯಾನ್ಸರ್‌ನಿಂದ ಅವರು ನಿಧನ ಹೊಂದಿದ್ದಾರೆ ಎಂಬ ಮಾಹಿತಿ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಈ ನಡುವೆ ಪೂನಂ ಅಂತ್ಯಕ್ರಿಯೆ ಅವರ ಹುಟ್ಟೂರಾದ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ ಎನ್ನಲಾಗಿದೆ. ಶುಕ್ರವಾರ ರಾತ್ರಿ ವೇಳೆಗೆ ನಟಿಯ ಅಂತ್ಯ ಸಂಸ್ಕಾರ ಪೂರ್ಣಗೊಂಡಿದೆ ಎಂದು ಅವರ ಮ್ಯಾನೇಜರ್ ಪಾರುಲ್ ಚಾವ್ಲಾ ತಿಳಿಸಿದ್ದಾರೆ.