ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳಕ್ಕೆ ಕೇಂದ್ರ ಸರಕಾರದ ವಿರುದ್ಧ ವಿರೋಧ ಪಕ್ಷಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಈ ಬೆನ್ನಲ್ಲೇ ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಹಾರ್ಮೋಜ್ ಜಲಸಂಧಿ ತೈಲ ಹಡಗುಗಳ ಸಂಚಾರಕ್ಕೆ ಮುಕ್ತವಾದ ಬಳಿಕ ದರ ಕಡಿತವಾಗಲಿದೆ ಎಂದು ತಿಳಿಸಿದ್ದಾರೆ.
ಜಾಗತಿಕವಾಗಿ ತೈಲ ಅಭಾವ ಎದುರಾಗಿದ್ದರು ಕೂಡ ಭಾರತದಲ್ಲಿ ಯಾವುದೇ ರೀತಿಯಲ್ಲಿ ಕೊರತೆ ಉಂಟಾಗದಂತೆ ನಿರಂತರವಾಗಿ ಸರಬರಾಜು ನಡೆಯುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಡಿಮೆಯಾಗಲಿದೆ ಎಂದು ತಿಳಿಸಿದರು.
2004-05ರ ಯುಪಿಎ ಅವಧಿಯಲ್ಲಿ ಕಂಪನಿಗಳಿಗೆ ಗ್ಯಾಸ್ ದರ ಏರಿಸುವ ಅಧಿಕಾರ ನೀಡಲಾಗಿದೆ. ಹೀಗಾಗಿ ಅಯಾ ಕಂಪನಿಗಳು ಗ್ಯಾಸ್ ಸಿಲಿಂಡರ್ ದರ ಏರಿಸಿವೆ ಎಂದು ಹೇಳಿದರು.



