ಮೋದಿ ತಲೆಗೆ ಗುಂಡು ಹಾರಿಸಿದರೆ ತಪ್ಪೇನು? ವಿವಾದಾತ್ಮಕ ಹೇಳಿಕೆ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆರ್‌ಜೆಡಿ ನಾಯಕ ಅವಧೇಶ್ ಸಿಂಗ್ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಲೆಗೆ ಗುಂಡು ಹಾರಿಸುವ ಕುರಿತು ಹೇಳಿಕೆ ನೀಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬೆನ್ನಿಗೇ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಬಿಜೆಪಿಯು ಈ ಐದು ಸೆಕೆಂಡುಗಳ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದು, ಇದರಲ್ಲಿ ಅವಧೇಶ್, ವಿವಾದಾತ್ಮಕ ಹೇಳಿಕೆ ದಾಖಲಾಗಿದೆ. ಮೋದಿ ತಲೆಗೆ ಗುಂಡು ಹಾರಿಸಿದರೆ ತಪ್ಪೇನು ಎಂದು ಇದರಲ್ಲಿ ಪ್ರಶ್ನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!