August 1, 2026
Saturday, August 1, 2026
spot_img

2027 ವಿಶ್ವಕಪ್‌ಗೆ ಟೀಮ್ ಇಂಡಿಯಾ ಹೇಗಿರಬೇಕು?: ಡಿಕೆ ಕನಸಿನ ತಂಡದ 15 ಆಟಗಾರರ ಲಿಸ್ಟ್ ಹೀಗಿದೆ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

2027ರ ಐಸಿಸಿ ಏಕದಿನ ವಿಶ್ವಕಪ್‌ಗೆ ಭಾರತ ಯಾವ ರೀತಿಯ ತಂಡದೊಂದಿಗೆ ಕಣಕ್ಕಿಳಿಯಬೇಕು ಎಂಬ ಕುರಿತು ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅನುಭವಿ ಹಾಗೂ ಯುವ ಆಟಗಾರರ ಸಮತೋಲನ ಹೊಂದಿರುವ 15 ಸದಸ್ಯರ ಸಂಭಾವ್ಯ ತಂಡವನ್ನು ಅವರು ಆಯ್ಕೆ ಮಾಡಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ರೋಹಿತ್-ಕೊಹ್ಲಿ ಮೇಲೂ ಭರವಸೆ

ಕಾರ್ತಿಕ್ ಅವರ ತಂಡದಲ್ಲಿ ನಾಯಕನಾಗಿ ಶುಭ್‌ಮನ್ ಗಿಲ್‌ಗೆ ಜವಾಬ್ದಾರಿ ನೀಡಲಾಗಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ ಮತ್ತು ಇಶಾನ್ ಕಿಶನ್ ಸ್ಥಾನ ಪಡೆದಿದ್ದಾರೆ. ಆಲ್‌ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವಕಾಶ ಪಡೆದಿದ್ದು, ಅನುಭವಿ ಆಟಗಾರರ ಅನುಭವ ದೊಡ್ಡ ಟೂರ್ನಿಯಲ್ಲಿ ತಂಡಕ್ಕೆ ನೆರವಾಗಲಿದೆ ಎಂಬ ವಿಶ್ವಾಸವನ್ನು ಕಾರ್ತಿಕ್ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಶಮಿ-ಭುವಿ ಆಯ್ಕೆ ಚರ್ಚೆಗೆ ಕಾರಣ

ವೇಗದ ಬೌಲಿಂಗ್ ವಿಭಾಗದಲ್ಲಿ ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಜೊತೆಗೆ ಮೊಹಮ್ಮದ್ ಶಮಿ ಮತ್ತು ಭುವನೇಶ್ವರ ಕುಮಾರ್ ಅವರನ್ನು ಆಯ್ಕೆ ಮಾಡಿರುವುದು ಅಚ್ಚರಿ ಮೂಡಿಸಿದೆ. ಸ್ಪಿನ್ ವಿಭಾಗದಲ್ಲಿ ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಅನುಭವ ಹಾಗೂ ಸಮತೋಲನದ ಈ ತಂಡ ವಿಶ್ವಕಪ್‌ನಲ್ಲಿ ಭಾರತಕ್ಕೆ ಬಲ ತುಂಬಬಲ್ಲ ಸಾಮರ್ಥ್ಯ ಹೊಂದಿದೆ ಎಂದು ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !