Wednesday, November 26, 2025

ಸ್ಮೃತಿ ಮಂಧನಾ ಮದುವೆ ಮುಂದೂಡಲು ಅಸಲಿ ಕಾರಣ ಬೇರೇನೇ? ಲೀಕ್ ಆಯ್ತು ಆ ಸೀಕ್ರೇಟ್ ಚಾಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ವಿವಾಹ ನವೆಂಬರ್ 23 ರಂದು ನಿಗದಿಯಾಗಿತ್ತು. ಆದರೆ ಸ್ಮೃತಿ ತಂದೆ ಶ್ರೀನಿವಾಸ್ ಮಂಧಾನಗೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿವಾಹವನ್ನು ಮುಂದೂಡಲಾಗಿದೆ.

ಈ ಮಧ್ಯೆ ವರನ ಸಹೋದರಿ ಪಾಲಕ್ ಅವರು ಸ್ಮೃತಿ ತಂದೆಯ ಅನಾರೋಗ್ಯದ ಕಾರಣದಿಂದಾಗಿ ಸ್ಮೃತಿ ಮತ್ತು ಪಲಾಶ್ ಅವರ ವಿವಾಹವನ್ನು ಸದ್ಯಕ್ಕೆ ಮುಂದೂಡಲಾಗಿದೆ. ಈ ಸೂಕ್ಷ್ಮ ಸಮಯದಲ್ಲಿ ಎರಡೂ ಕುಟುಂಬಗಳ ಗೌಪ್ಯತೆಯನ್ನು ನೀವೆಲ್ಲರೂ ಗೌರವಿಸಬೇಕೆಂದು ನಾವು ವಿನಂತಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ಮಾಹಿತಿಯ ಪ್ರಕಾರ, ಪಲಾಶ್ ಮುಚ್ಚಲ್ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರಿಗೆ ಏನಾಯ್ತು ಎಂಬುದು ಸ್ಪಷ್ಟವಾಗಿಲ್ಲ. ಈ ಮಧ್ಯೆ ಸ್ಮೃತಿ ತಮ್ಮ ಇನ್‌ಸ್ಟಾಗ್ರಾಮ್‌ನಿಂದ ಪಲಾಶ್ ಅವರೊಂದಿಗಿರುವ ಎಲ್ಲಾ ಫೋಟೋಗಳು ಮತ್ತು ವಿಡಿಯೋ ಸಹ ಡಿಲೀಟ್ ಮಾಡಿದ್ದಾರೆ. ಇದೀಗ ಮತ್ತೊಂದು ಸೋಷಿಯಲ್ ಮೀಡಿಯಾ ಚಾಟ್‌ ಲೀಕ್ ಆಗಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಸ್ಮೃತಿ ಪ್ರೀತಿಗೆ ಮೋಸ ಮಾಡಿದ್ರಾ ಪಲಾಶ್ ಮುಚ್ಚಲ್?
ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಹಿಳೆಯೊಬ್ಬರು ಪಲಾಶ್ ಮುಚ್ಚಲ್ ಅವರೊಂದಿಗೆ ಇನ್‌ಸ್ಟಾಗ್ರಾಂನಲ್ಲಿ ಚಾಟ್ ಮಾಡಿರುವ ಸ್ಕ್ರೀನ್‌ಶಾಟ್ ಸೋಷಿಯಲ್ ಮೀಡಿಯಾದಲ್ಲಿ ಲೀಕ್ ಮಾಡಿದ ಬೆನ್ನಲ್ಲೇ ಇದು ರೆಡ್ಡಿಟ್‌ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸ್ಮೃತಿ ಮಂಧನಾ ಹಾಗೂ ಪಲಾಶ್ ಮುಚ್ಚಲ್ ಮದುವೆ ಮುಂದೂಡಿದ ಕೆಲವೇ ಗಂಟೆಗಳಲ್ಲಿ ಈ ಸ್ಕ್ರೀನ್‌ಶಾಟ್ ಬೆಳಕಿಗೆ ಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಮೇರಿ ಡಿ’ಕೋಸ್ಟಾ ಎನ್ನುವ ಮಹಿಳೆ ಈ ಸ್ಕ್ರೀನ್‌ಶಾಟ್ ಅನ್ನು ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಈ ಚಾಟ್‌ನಲ್ಲಿ ಪಲಾಶ್ ಮುಚ್ಚಲ್, ಸ್ಮೃತಿ ಮಂಧನಾ ಜತೆಗಿನ ಲಾಂಗ್ ಡಿಸ್ಟೆನ್ಸ್ ರಿಲೇಷನ್‌ಶಿಪ್ ಹಾಗೂ ಆಕೆಯ ಜತೆ ಟೂರ್ ಹೋಗುವುದರ ಬಗ್ಗೆ ಆಗುವ ಸವಾಲುಗಳ ಬಗ್ಗೆ ಪಲಾಶ್ ಮುಚ್ಚಲ್ ಚಾಟ್ ಮಾಡಿದ್ದಾರೆ.

ಇದಷ್ಟೇ ಅಲ್ಲದೇ ಮೇರಿ ಡಿ’ಕೋಸ್ಟಾ ಅವರ ಜತೆ ಪಲಾಶ್ ಮುಚ್ಚಲ್ ಫ್ಲರ್ಟ್ ಮಾಡುವ ರೀತಿಯಲ್ಲಿಯೂ ಚಾಟ್ ಮಾಡಿದ್ದಾರೆ. ಇದರ ಜತೆಗೆ ಆಕೆಯನ್ನು ತಮ್ಮ ಜತೆ ಈಜಾಡಲೂ ಕರೆದಿರುವುದು ಸ್ಪಷ್ಟವಾಗಿ ಬೆಳಕಿಗೆ ಬಂದಿದೆ. ಇದೆಲ್ಲವನ್ನು ಗಮನಿಸಿದ್ರೆ ಪಲಾಶ್ ಮುಚ್ಚಲ್, ಸ್ಮೃತಿ ಮಂಧನಾ ಅವರ ಪ್ರೀತಿಗೆ ಮೋಸ ಮಾಡಿದ್ರಾ ಎನ್ನುವ ಅನುಮಾನ ಕಾಡಲಾರಂಭಿಸಿದೆ.

ಇದೀಗ ಸ್ಮೃತಿ ಮಂಧನಾ ಮಾತ್ರವಲ್ಲದೇ ಆಕೆಯ ಗೆಳತಿಯರಾದ ಜೆಮಿಮಾ ರೋಡ್ರಿಗ್ಸ್ ಸೇರಿದಂತೆ ಹಲವು ಆಪ್ತರು ಮದುವೆ ಪೂರ್ವ ಕಾರ್ಯಕ್ರಮಗಳ ಫೋಟೋ ಹಾಗೂ ವಿಡಿಯೋಗಳನ್ನು ಡಿಲೀಟ್ ಮಾಡಿರುವುದು ಪಲಾಶ್ ಮುಚ್ಚಲ್ ಹಾಗೂ ಸ್ಮೃತಿ ಮಂಧನಾ ಮದುವೆ ಸಂಬಂಧ ಮುರಿದುಬಿತ್ತಾ ಎನ್ನುವ ಅನುಮಾನ ಹುಟ್ಟುಹಾಕಿದೆ.

error: Content is protected !!