ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಲೋಕಸಭೆ ಚುನಾವಣೆಯ ದಿನಾಂಕ ಇನ್ನೇನು ಕೆಲವೇ ಕ್ಷಣಗಳಲ್ಲಿ ಘೋಷಣೆಯಾಗಲಿದೆ. ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಅವರು ಈಗಾಗಲೇ ಪತ್ರಿಕಾಗೋಷ್ಠಿ ಶುರು ಮಾಡಿದ್ದು, ಚುನಾವಣೆಯ ಕುರಿತು ಮಾಹಿತಿ ನೀಡುತ್ತಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಒಟ್ಟು 97 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಆಯೋಗ ಘೋಷಿಸಿದೆ.
ಸುದ್ದಿಗೋಷ್ಠಿ ಹೈಲೈಟ್ಸ್
ಈ ಬಾರಿ ಒಟ್ಟು 97 ಕೋಟಿ ಜನರು ಮತದಾನ ಮಾಡಲಿದ್ದಾರೆ. ದೇಶಾದ್ಯಂತ 10.9 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತೆ. 1.5 ಕೋಟಿ ಸಿಬ್ಬಂದಿ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ದೇಶಾದ್ಯಂತ 10.9 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತೆ. 1.5 ಕೋಟಿ ಸಿಬ್ಬಂದಿ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ.