SHOCKING | ಅಮ್ಮ ಇಲ್ಲದ ಜಗತ್ತಿನಲ್ಲಿ ನಾನೇನು ಮಾಡ್ಲಿ? ಮನನೊಂದು ಆತ್ಮಹತ್ಯೆಗೆ ಶರಣಾದ ಮಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ತಾಯಿಯ ಸಾವಿನಿಂದ ಮನನೊಂದು ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ.

ನೇಣಿಗೆ ಶರಣಾದ ಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್ ಬಾಬು (24) ಎಂದು ಗುರುತಿಸಲಾಗಿದೆ. ಇವರ ತಾಯಿ ಚಂದ್ರಿಕಾ ಸಹ ಕಳೆದ ಒಂದೂವರೆ ತಿಂಗಳ ಹಿಂದೆ ಸಾಲಬಾಧೆಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದರು.

ಮೃತ ಯುವಕ, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ತಾಯಿಯ ಸಾವಿನ ನಂತರ ರಕ್ಷಿತ್‌ ಅತೀವ ದುಃಖದಲ್ಲಿದ್ದರು. ಅಮ್ಮನಿಲ್ಲದ ಜಗತ್ತಿನಲ್ಲಿ ಇರಲು ಸಾಧ್ಯವಿಲ್ಲ ಎಂದು ನಿರ್ಧರಿಸಿ ರಕ್ಷಿತ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!