ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ನಾಡು, ನುಡಿ, ಜಲ, ಭಾಷೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೊಡುಗೆ ರಾಜ್ಯಕ್ಕೆ ಏನು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.
ನೀರಾವರಿ ವಿಚಾರದಲ್ಲಿ ದೇವೇಗೌಡರು, ಮೋದಿಯವರ ಚಿಯರ್ ಲೀಡರ್ ಆಗೋದು ಬೇಡ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯರಿಂದ ದೇವೇಗೌಡರು ನೀರಾವರಿ, ರಾಜ್ಯದ ಜನತೆಯ ರಕ್ಷಣೆ ಮಾಡೋಕೆ ಇವರಿಂದ ಹೇಳಿಸಿಕೊಳ್ಳಬೇಕಿಲ್ಲ. ಈ ರಾಜ್ಯದ ನೆಲ, ಜಲ,ಭಾಷೆ ವಿಚಾರದಲ್ಲಿ ನಿಮ್ಮ ಕೊಡುಗೆ ಏನು? ಯಾವತ್ತಾದ್ರು ಒಂದು ದಿನ ನೀರಿನ ಬಗ್ಗೆ ವಿಧಾನಸಭೆಯಲ್ಲಿ ಮಾತಾಡಿದ್ದಾರಾ? ಎಂದು ತಿರುಗೇಟು ನೀಡಿದ್ದಾರೆ.