WEATHER | ರಾಜ್ಯದಲ್ಲಿ ಹೇಗಿರಲಿದೆ ವಾತಾವರಣ? ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಬಿದ್ದಿದೆ, ಕೆಲವು ಜಿಲ್ಲೆಗಳಲ್ಲಿ ಸಾಕಷ್ಟು ಮಳೆಯಾಗಿದ್ದು, ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿವೆ. ಇಂದು ರಾಜ್ಯದ ಹವಾಮಾನ ಹೇಗಿದೆ?

ಕೊಡಗು, ಮಂಡ್ಯ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ  ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!