WEATHER | ಹೇಗಿರಲಿದೆ ಇಂದಿನ ಹವಾಮಾನ? ರಾಜ್ಯದ ಹಲವೆಡೆ ಸಾಧಾರಣ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ಮೂರು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ವಾತಾವರಣವಿರಲಿದೆ. ಬಾಗಲಕೋಟೆ, ಕಲಬುರಗಿ, ವಿಜಯಪುರ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಉಷ್ಣ ಅಲೆ ಇರುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 42.3 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!