Wednesday, June 7, 2023

Latest Posts

ಪ್ರಮಾಣ ವಚನ ಎರಡು ದಿನಗಳ ಕಾಲ ತಡೆದಿದ್ದರೆ ಏನಾಗುತ್ತಿತ್ತು?: ಮೋದಿ ರೋಡ್​ ಶೋ ಟೀಕಿಸಿದ್ದ ಸಿದ್ದರಾಮಯ್ಯಗೆ ಬಿಎಲ್ ಸಂತೋಷ್ ಟಕ್ಕರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚುನಾವಣೆ ಮುನ್ನ ಪ್ರಧಾನಿ ಮೋದಿ ಅವರ ರೋಡ್ ಶೋ ವೇಳೆ ನೀಟ್ ಪರೀಕ್ಷೆ ಇತ್ತು. ಹೀಗಾಗಿ ನ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಇನ್ನು ನಾಳೆ (ಮೇ 20) ಸಿಇಟಿ​ ಪರೀಕ್ಷೆ (CET 2023) ಇದೆ. ಆದರೆ ನಾಳೆಯೇ ಸಿದ್ದರಾಮಯ್ಯ (Siddaramaiah) ಪ್ರಮಾಣವಚನ ಸಮಾರಂಭ ಇಟ್ಟುಕೊಂಡಿದ್ದಾರೆ. ಇದು ಸರಿಯೇ ? ಎಂದು ಬಿಎಲ್ ಸಂತೋಷ್ (BL Santhosh) ಪ್ರಶ್ನೆ ಮಾಡಿದ್ದಾರೆ.

ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಟ್ವೀಟ್ ಮೂಲಕ ಕೌಂಟರ್ ಕೊಟ್ಟಿದ್ದು, “ನಮ್ಮ ನಿಯೋಜಿತ ಸಿಎಂ ಟ್ವೀಟ್ ಮಾಡಿ ತುಂಬಾ ದಿನಗಳು ಕಳೆದಿಲ್ಲ. ನಾಳೆ ರಾಜ್ಯಾದ್ಯಂತ ಮತ್ತು ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷೆ ಇದೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪ್ರಮಾಣ ವಚನ ಒಂದು ಅಥವಾ ಎರಡು ದಿನಗಳ ಕಾಲ ತಡೆದಿದ್ದರೆ ಏನಾಗುತ್ತಿತ್ತು? ವಿದ್ಯಾರ್ಥಿಗಳಿಗೂ ಸಮಸ್ಯೆಯಾಗುತ್ತಿರಲಿಲ್ಲ” ಎಂದು ಹೇಳಿದ್ದಾರೆ.

 

ಮೋದಿ ರೋಡ್ ಶೋ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
ನೀಟ್ ಪರೀಕ್ಷಾರ್ಥಿಗಳು ಮತ್ತು ಬೆಂಗಳೂರಿನ ಜನರ ವಿರೋಧವನ್ನು ಧಿಕ್ಕರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮೇ 7ರಂದು ಬೆಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಅತ್ಯಂತ ಬೇಜವಾಬ್ದಾರಿತನದ ನಡೆ. ಮೋದಿ ಅವರು ಪ್ರಚಾರ ಮಾಡಲಿ ನಮ್ಮ ತಕರಾರು ಇಲ್ಲ. ಆದರೆ ವಿದ್ಯಾರ್ಥಿಗಳಿಗೆ ಆಗುವ ತೊಂದರೆಗೆ ಯಾರು ಹೊಣೆ? ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನಿಸಿದ್ದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!