ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವುದೇ ದೇಶದಲ್ಲಿದ್ದರು ಪ್ರಜ್ವಲ್ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ಕುರಿತು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದರು.
ಪ್ರಜ್ವಲ್ ರೇವಣ್ಣ ನನ್ನ ಮಗ ಎಂದು ಚುನಾವಣೆ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ನನ್ನ ಮಗ ನಿಖಿಲ್ ಬೇರೆ ಅಲ್ಲ, ಪ್ರಜ್ವಲ್ ಬೇರೆಯಲ್ಲ ಎಂದಿದ್ದರು. ಈಗ ಅವರ ಕುಟುಂಬ ನಮಗಿಂತ ಭಿನ್ನವಾಗಿದೆ ಅಂತಿದ್ದಾರೆ.
ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದರು.