ದೇಶಕ್ಕಾಗಿ ಮೋದಿ ಸರಕಾರ ಏನೇ ನಿರ್ಧಾರ ಕೈಗೊಂಡರೂ ನಮ್ಮ ಬೆಂಬಲ: ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನೇ ನಿರ್ಧಾರಗಳನ್ನು ಅಥವಾ ಕ್ರಮಗಳನ್ನು ಕೈಗೊಂಡರೂ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದ್ದಾರೆ.

ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು. ಆದರೆ ಇದರಲ್ಲೂ ರಾಜಕೀಯ ಆಗಬಾರದು. ನಮ್ಮ ದೇಶದನ್ನು ಕೆಣಕಿದ್ರೆ ನಾವು ಸುಮ್ಮನಿರಬಾರದು. ಪಾಕಿಸ್ತಾನದ ಮೇಲೆ ಕ್ರಮ ಆಗಲಿ ಎಂದು ನಾವು ಬೆಂಬಲ ಕೊಟ್ಟಿದ್ದೇವೆ. ನಮಗೆ ದೇಶ ಮುಖ್ಯ. ಹೀಗಾಗಿ ಯಾವುದೇ ಕ್ರಮ ಕೈಗೊಂಡರೂ ನಮ್ಮ ಬೆಂಬಲ ಇರುತ್ತದೆ ಎಂದರು.

ಕೇವಲ ಭಾಷಣ ಮಾಡಿಕೊಂಡು ಕುಳಿತುಕೊಂಡರೆ ಸಾಲದು. ನಮ್ಮ ದೇಶದವರನ್ನು ಕೆಣಕಿದವರಿಗೆ ತಕ್ಕ ಉತ್ತರ ಕೊಡಬೇಕು. ಈ ವಿಚಾರದಲ್ಲಿ ರಾಜಕೀಯ ಆಗಬಾರದು ಎಂದು ಖರ್ಗೆ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!