ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂತ್ರಿಗಳು ಇನ್ನಾದರೂ ದ್ವೇಷದ ರಾಜಕಾರಣವನ್ನು ಬದಿಗಿಟ್ಟು, ಕೇಂದ್ರ ಸರ್ಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಗಳು ಇನ್ನಾದರೂ ದ್ವೇಷದ ರಾಜಕಾರಣವನ್ನು ಬದಿಗಿಡಬೇಕು. ಕೇಂದ್ರ ಸರ್ಕಾರದ ಜೊತೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು. ಇದರಿಂದ ರಾಜ್ಯಕ್ಕೆ ಮತ್ತು ಬಡವರಿಗೆ ಒಳ್ಳೆಯದಾಗುತ್ತದೆ. ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ ವಿನಂತಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿ ನೀಡಿದ ಆದೇಶವನ್ನು ರಾಜ್ಯದ ಹೈಕೋರ್ಟ್ ರದ್ದು ಮಾಡಿದೆ. ಜನೌಷಧಿ ಕೇಂದ್ರಗಳನ್ನು ಮತ್ತೆ ತೆರೆಯಲು ಸೂಚಿಸಿರುವುದನ್ನು ಸ್ವಾಗತಿಸುತ್ತೇವೆ. ಜನೌಷಧಿ ಕೇಂದ್ರಗಳು ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಒಂದು ಕಾರ್ಯಕ್ರಮ, ಒಂದು ಕೊಡುಗೆ. ಈ ರಾಜ್ಯದ, ದೇಶದ ಬಡಜನರಿಗೆ ಕೈಗೆಟಕುವ ದರದಲ್ಲಿ ಔಷಧಿಗಳು ಸಿಗಬೇಕು. ಇದರಿಂದ ಬಡವರಿಗೆ ಅನುಕೂಲ ಆಗಬೇಕೆಂಬ ಸದುದ್ದೇಶದಿಂದ ಆ ಕಾರ್ಯಕ್ರಮ ಜಾರಿಗೊಳಿಸಿದ್ದರು ಎಂದು ವಿವರಿಸಿದ್ದಾರೆ.
ಆಗಿದ್ದೆಲ್ಲಾ ಆಯ್ತು, ಇನ್ನಾದರೂ ಸಿಎಂ ಸಿದ್ದರಾಮಯ್ಯ ದ್ವೇಷದ ರಾಜಕಾರಣ ಬಿಡ್ಬೇಕು: ಬಿವೈವಿ

