ದಿಗಂತ ವರದಿ ಹುಬ್ಬಳ್ಳಿ:
ಕಾಂಗ್ರೆಸ್ ಸರ್ಕಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಲು ಷಡ್ಯಂತ್ರ ಮಾಡುತ್ತಿದ್ದು ಅದೆಲ್ಲದರಿಂದಲೂ ಸಹ ಮುಕ್ತರಾಗಿ ಹೊರ ಬರುತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಳಂಕರಹಿತ ಪಕ್ಷಾತೀತ ನಾಯಕರಾಗಿದ್ದು ಅವರ ಮೇಲೆ ಬಂದ ಪ್ರಕರಣ ಆ ಮಹಿಳೆ ಮಾನಸಿಕ ಅಸ್ತವ್ಯಸ್ತೆ ಎಂದು ಈ ಹಿಂದೆ ಗೃಹ ಸಚಿವರೇ ಹೇಳಿಕೆ ನೀಡಿದ್ದಾರೆ. ಆದರೆ ಇದೀಗ ಅವರ ಬಂಧಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿ ರುವುದು ಕಾಂಗ್ರೆಸ್ ಸರಕಾರದ ನೀಚ ರಾಜಕೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.