ಏನೇ ದಾಖಲೆ ಇದ್ರೂ, ಒಂದು ಕ್ಷಣವೂ ಯೋಚಿಸದೇ ಬಿಡುಗಡೆ ಮಾಡಲಿ: ವಿಜಯೇಂದ್ರ ಓಪನ್ ಚಾಲೆಂಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನನ್ನ ವಿರುದ್ಧ ಯಾವುದೇ ಸಾಕ್ಷಿ ಅಥವಾ ವೀಡಿಯೊಗಳು ಇದ್ದರೆ ದಯವಿಟ್ಟು ಅದರ ಬಗ್ಗೆ ಯೋಚಿಸದೆ ತಕ್ಷಣ ಬಿಡುಗಡೆ ಮಾಡಿ. ಸೂಕ್ತ ಕ್ಷಣಕ್ಕಾಗಿ ಕಾಯುವ ಅಗತ್ಯವಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲು ಬೆಂಗಳೂರಿನ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಕೌನ್ಸಿಲ್ ಸಭೆ ನಡೆಯಿತು. ಸಭೆಯ ಬಳಿಕ ವಿಪಕ್ಷಗಳೊಂದಿಗೆ ವಿಜಯೇಂದ್ರ ಹೊಂದಾಣಿಕೆ ಮಾಡಿಕೊಂಡಿರುವ ಬಗ್ಗೆ ಸಾಕ್ಷ್ಯಾಧಾರ ಇದೆ, ಬಿಡುಗಡೆ ಮಾಡ್ಲಾ? ಅನ್ನೋ ಯತ್ನಾಳ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಯತ್ನಾಳ್‌ ಒಂದು ಕ್ಷಣವೂ ಯೋಚನೆ ಮಾಡೋದು ಬೇಡ. ನನ್ನ ವಿರುದ್ಧ ದಾಖಲೆ, ವೀಡಿಯೋ ಇದ್ದರೆ ಬಿಡುಗಡೆ ಮಾಡಲಿ. ಕಾಂಗ್ರೆಸ್ ಹೊಂದಾಣಿಕೆ ನನಗೆ ಅವಶ್ಯಕತೆ ಇಲ್ಲ. ವಿಜಯೇಂದ್ರ ಬದಲಾವಣೆ ಮಾಡಲಿ ಅಂತ ಅವರ ಜೊತೆ ಇನ್ನೂ ಹತ್ತು ಜನರನ್ನು ಸೇರಿಸಿಕೊಳ್ಳಲಿ, ನನಗೇನು ತೊಂದರೆ ಇಲ್ಲ. ನಾನು ಮನವಿ ಮಾಡುತ್ತೇನೆ ಪಕ್ಷದ ಕಾರ್ಯಕರ್ತರಿಗೆ ಅವಮಾನ ಆಗುವ ರೀತಿಯಲ್ಲಿ ನಡೆದುಕೊಳ್ಳಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

 

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!