ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಬಿಜೆಪಿ ಪ್ರತಿಭಟನೆ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಪುನರುಚ್ಚರಿಸಿದರು. ನಾನೇಕೆ ಬಿಜೆಪಿಗರು ಕೇಳಿದ ತಕ್ಷಣ ರಾಜೀನಾಮೆ ಕೊಡಬೇಕು, ನಾನು ಕೊಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ರಾಜೀನಾಮೆ ನೀಡಲು ಯಾವುದೇ ಕಾರಣವಿಲ್ಲ. ಹಲವು ಬಿಜೆಪಿ ನಾಯಕರ ವಿರುದ್ಧ ಪ್ರಕರಣಗಳು ದಾಖಲಾಗಿತ್ತು ಅವರು ರಾಜೀನಾಮೆ ಕೊಟ್ರಾ..? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.