ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಒಂಬತ್ತನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ವೇಳೆ ಜವಳಿ ಉದ್ಯಮಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.
ರೇಷ್ಮೆ, ಉಣ್ಣೆ ಮತ್ತು ಸೆಣಬಿಗೆ ಸಂಬಂಧಿಸಿದ ನಾರುಗಳಲ್ಲಿ ಸ್ವಾವಲಂಬನೆ ಸಾಧಿಸಲು ರಾಷ್ಟ್ರೀಯ ಫೈಬರ್ ಯೋಜನೆಯನ್ನು ಪರಿಚಯಿಸಲಾಗುವುದು.
ಸಾಂಪ್ರದಾಯಿಕ ಕ್ಲಸ್ಟರ್‌ಗಳನ್ನು ಆಧುನೀಕರಿಸಲು ಜವಳಿ ವಿಸ್ತರಣೆ ಮತ್ತು ಉದ್ಯೋಗ ಯೋಜನೆಯನ್ನು ಪರಿಚಯಿಸಲಾಗುವುದು. ನೇಕಾರರು ಮತ್ತು ಕುಶಲಕರ್ಮಿಗಳನ್ನು ಬೆಂಬಲಿಸಲು ರಾಷ್ಟ್ರೀಯ ಕೈಮಗ್ಗ ಮತ್ತು ಕರಕುಶಲ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಮೆಗಾ ಜವಳಿ ಪಾರ್ಕ್‌ಗಳನ್ನು ಸ್ಥಾಪಿಸುವ ಪ್ರಸ್ತಾಪ ಮಾಡಲಾಗಿದೆ ಎಂದಿದ್ದಾರೆ.



