September 27, 2026
Sunday, September 27, 2026
spot_img

WEATHER | ಏನಿದು ಆಶ್ಚರ್ಯ? ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಂತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಹಲವು ದಿನಗಳಿಂದ ಭಾರೀ ಬಿಸಿಲಿನ ವಾತಾವರಣವಿದ್ದು, ಜನ ಹೈರಾಣಾಗಿದ್ದಾರೆ. ಆದರೆ ಕೆಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ.

ಇದು ಭಾರೀ ಮಳೆಯಲ್ಲ, ಗುಡುಗು ಜತೆಗಿನ ಸಣ್ಣ ಹನಿಗಳ ಮಳೆ, ಜೊತೆಗೆ ಬಿರುಗಾಳಿಯೂ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಎಲ್ಲೆಲ್ಲಿ ಬಿಸಿಲು?
ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ

ಎಲ್ಲೆಲ್ಲಿ ಮಳೆ?
ಉತ್ತರ ಒಳನಾಡಿನ ಯಾದಗಿರಿ, ರಾಯಚೂರು ಜಿಲ್ಲೆಗಳು ಸೇರಿದಂತೆ ದಕ್ಷಿಣದ ಹಾಸನ, ಕೊಡಗು, ಮೈಸೂರು, ಚಿಕ್ಕಮಗಳೂರಿನಲ್ಲಿ ಗುಡುಗು-ಸಿಡಿಲು ಸಹಿತ ತುಂತುರು ಮಳೆಯಾಗಲಿದೆ.

ಇನ್ನುಳಿದ ಜಿಲ್ಲೆಗಳಲ್ಲಿ ಇಂದು ಒಣಹವೆ ಇರಲಿದೆ. ಬಿಸಿಲು ಹೆಚ್ಚಿರುವ ಪ್ರದೇಶಗಳಲ್ಲಿ ಜನ ಮಧ್ಯಾಹ್ನದ ಹೊತ್ತು ಬಿಸಿಲಿಗೆ ಬರಬೇಡಿ ಎಂದು ವೈದ್ಯರು ಸೂಚನೆ ನೀಡಿದ್ದಾರೆ.

Must Read