Saturday, July 2, 2022

Latest Posts

ಜೂನ್ 14ರಿಂದ ಅನ್​ಲಾಕ್ ಆದ ಜಿಲ್ಲೆಗಳಲ್ಲಿ ಯಾವುದಕ್ಕಿದೆ ಅವಕಾಶ? ಇಲ್ಲಿದೆ ಮಾಹಿತಿ…

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಹೆಚ್ಚಾಗಿರುವಂತ 1೧ ಜಿಲ್ಲೆಗಳಲ್ಲಿ ಲಾಕ್ ಡೌನ್ ಜೂನ್ 21ರವರೆಗೆ ಮುಂದುವರೆಯಲಿದ್ದು, ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಜಾರಿಗೊಳಿಸಲಾಗುತ್ತಿದೆ. ಆದರೆ ಕರ್ಪ್ಯೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಒಂದೂವರೆ ಎರಡು ಗಂಟೆಯಿಂದ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ, ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಇಂದಿನ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಅನ್ವಯವಾಗುವಂತೆ ಯಾವುದೇ ಮಾರ್ಗಸೂಚಿ ಅನ್ವಯವಾಗುವುದಿಲ್ಲ. ಯಥಾಸ್ಥಿತಿ ಮುಂದುವರೆಯಲಿದೆ.
ಕೋವಿಡ್ ಕರ್ಪ್ಯೂ ರಾತ್ರಿ 7 ರಿಂದ ಬೆಳಿಗ್ಗೆ 5 ಜಾರಿಯಲ್ಲಿರಲಿದೆ. ವಾರಾಂತ್ಯ ಕರ್ಪೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿ ಇರಲಿದೆ.

ಲಾಕ್ ಡೌನ್ ನಿರ್ಬಂಧಗಳಲ್ಲಿ ಮಾರ್ಪಾಡು: (ಜೂನ್ 21 ರವರೆಗೆ) 

 • ಎಲ್ಲಾ ಕಾರ್ಖಾನೆಗಳನ್ನು ಶೇ.50ರಷ್ಟು ಸಿಬ್ಬಂದಿಗಳೊಂದಿಗೆ ಕೆಲಸಕ್ಕೆ ಅವಕಾಶ.
 • ಗಾರ್ಮೆಟ್ಸ್ ಗಳಲ್ಲಿ ಶೇ.30ರಷ್ಟು ನೌಕರರಿಗೆ ಕೆಲಸ ಮಾಡಲು ಅವಕಾಶ.
 • ಮಧ್ಯಾಹ್ನ 2 ಗಂಟೆಯವರೆಗೆಅಗತ್ಯ ವಸ್ತುಗಳ ಖರೀದಿಗೆ ಅವಕಾಶ
 • ಎಲ್ಲಾ ನಿರ್ಮಾಣ ಚಟುವಟಿಕೆ ಪ್ರಾರಂಭಿಸಲು ಆವಕಾಶ.
  ಇಂತಹ ಅಂಗಡಿ ತೆರೆಯಲು ಅವಕಾಶ.
 • ಪಾರ್ಕ್ ಬೆಳಿಗ್ಗೆ 5 ರಿಂದ 10ರವರೆಗೆ ತೆರೆಯಲು ಅವಕಾಶ.
  ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ 2ಗಂಟೆಯವರೆಗೆ ಅವಕಾಶ
 • ಆಟೋ ಟ್ಯಾಕ್ಸಿ ಸಂಚಾರಕ್ಕೆ ಇಬ್ಬರು ತೆರಳೋದಕ್ಕೆ ಅವಕಾಶ
 • ಕೆಲವು ಸರ್ಕಾರಿ ಕಚೇರಿಗಳಿಗೆ ಶೇ.50ರಷ್ಟು ನೌಕರರೊಂದಿಗೆ ತೆರೆಯೋದಕ್ಕೆ ಅವಕಾಶ
 • ಅಂತಾ ಜಿಲ್ಲಾ ಓಡಾಟಕ್ಕೂ ಅವಕಾಶ
 • ಹೊಟೇಲ್​ಗಳಲ್ಲಿ ಪಾರ್ಸೆಲ್​ಗೆ ಮಾತ್ರ ಅವಕಾಶ
 • ಬಾರ್ ಗಳಲ್ಲಿ ಮದ್ಯಪಾನ ಪಾರ್ಸಲ್​ಗೆ ಮಾತ್ರ ಅವಕಾಶ
 • ಸಿಮೆಂಟ್, ಸ್ಟೀಲ್ ಅಂಗಡಿಗಳನ್ನು ತೆರೆಯಲು ಅವಕಾಶವಿದೆ
 • ಬಾರ್​ಗಳನ್ನ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ ಎರಡು ಗಂಟೆ ವರೆಗೂ ಅವಕಾಶ
 • ಬಿಎಂಟಿಸಿ, ಸಾರಿಗೆ ಬಸ್ ಸಂಚಾರ ಆರಂಭಿಸೋದಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss