ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸುರ್ಜೆವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನು ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ ಎಂದಿದ್ದಾರೆ.
ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಕರೆದಿಲ್ಲ ಎಂದಾಗ, ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ದಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ದಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದೇನೆ ಎಂದರು.
ಬಿಜೆಪಿಯವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ. ಅವರ ಮಧ್ಯೆಯೇ ಸಾಕಷ್ಟು ತಿಕ್ಕಾಟಗಳು ನಡೆಯುತ್ತಿವೆ. ಮೊದಲು ಅವರ ಸಮಸ್ಯೆಗಳನ್ನು ಸರಿಮಾಡಿಕೊಳ್ಳಲಿ ಎಂದರು.