Monday, March 27, 2023

Latest Posts

ಜನವರಿಯಲ್ಲಿ ಭಾರತದ 29 ಲಕ್ಷ ಖಾತೆ ನಿಷೇಧಿಸಿದ ವಾಟ್ಸಾಪ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮೆಟಾ-ಮಾಲೀಕತ್ವದ ವಾಟ್ಸಾಪ್ ಜನವರಿ ತಿಂಗಳಲ್ಲಿ ಭಾರತದಲ್ಲಿ 29 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ.

ಜನವರಿ 1 ಮತ್ತು ಜನವರಿ 31ರ ನಡುವೆ 2,918,000 ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಬಳಕೆದಾರರಿಂದ ಯಾವುದೇ ವರದಿಗಳು ಬರುವ ಮೊದಲು ಈ ಖಾತೆಗಳಲ್ಲಿ 1,038,000 ಅನ್ನು ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ ಎಂದು ಕಂಪನಿಯು ತನ್ನ ಮಾಸಿಕ ವರದಿಯಲ್ಲಿ ತಿಳಿಸಿದೆ.

ದೇಶದಲ್ಲಿ ಸುಮಾರು 500 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಅತ್ಯಂತ ಜನಪ್ರಿಯ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಜನವರಿಯಲ್ಲಿ ದೇಶದಲ್ಲಿ 1,461 ದೂರು ವರದಿಗಳನ್ನು ಸ್ವೀಕರಿಸಿದೆ.

ವಾಟ್ಸಾಪ್‌ ಪ್ಲಾಟ್‌ಫಾರ್ಮ್‌ ವಿರುದ್ಧದ ನಿಂದನೆಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಕಂಪನಿಯ ವಕ್ತಾರರು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!