ಅಕ್ಟೋಬರ್‌ನಲ್ಲಿ ಭಾರತದಲ್ಲಿ 75 ಲಕ್ಷ ಖಾತೆ ನಿಷೇಧಿಸಿದ ವಾಟ್ಸಾಪ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೆಟಾ-ಮಾಲೀಕತ್ವದ ವಾಟ್ಸಾಪ್ ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲಿ 75 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ.

ಅಕ್ಟೋಬರ್‌ 1 ಮತ್ತು ಅಕ್ಟೋಬರ್‌ 31ರ ನಡುವೆ‌ 7,548,000 ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಈ ಪೈಕಿ 1,919,000 ಬಳಕೆದಾರರನ್ನು ಈಗಾಗಲೇ ದೂರುಗಳಿಂದ ನಿಷೇಧಿಸಲಾಗಿದೆ ಎಂದು ಕಂಪನಿಯು ತನ್ನ ಮಾಸಿಕ ವರದಿಯಲ್ಲಿ ತಿಳಿಸಿದೆ.

ದೇಶದಲ್ಲಿ ಸುಮಾರು 500 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಅತ್ಯಂತ ಜನಪ್ರಿಯ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಅಕ್ಟೋಬರ್‌ನಲ್ಲಿ ದೇಶದಲ್ಲಿ 9,063 ದೂರು ವರದಿಗಳನ್ನು ಸ್ವೀಕರಿಸಿದೆ.

ವಾಟ್ಸಾಪ್‌ ಪ್ಲಾಟ್‌ಫಾರ್ಮ್‌ ವಿರುದ್ಧದ ನಿಂದನೆಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಕಂಪನಿಯ ವಕ್ತಾರರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!