ಹೊಸದಿಗಂತ ಡಿಜಿಟಲ್ ಡೆಸ್ಕ್
ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಮತ್ತೊಂದು ಆಘಾತ ಎದುರಾಗಿದೆ. ಹಿರಿಯ ನಾಯಕ ಮತ್ತು ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬ್ರಿಜೇಶ್ ಕಾಳಪ್ಪ ಅವರು 1997 ರಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡು ರಾಜೀನಾಮೆ ನಿರ್ಧಾರದ ಕುರಿತು ಮಾಹಿತಿ ಹಂಚಿಕೊಂಡಿರುವ ಬ್ರಿಜೇಶ್ ಕಾಳಪ್ಪ, ಮೇ. 30 ರಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದೇನೆ. ನನ್ನ ರಾಜಕೀಯ ಜೀವನದ ಪ್ರಾರಂಭದ ದಿನಗಳಿಂದ ನನಗೆ ಒದಗಿಸಿದ ಹಲವಾರು ಅವಕಾಶಗಳಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಿಮ್ಮೆಲ್ಲರ ಆಶೀರ್ವಾದದಿಂದಾಗಿ ನಾನು ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರನಾಗಿ ಕಾರ್ಯನಿರ್ವಹಿಸುವ ಅವಕಾಶ ಸಿಕ್ಕಿತ್ತು.
2013 ರಿಂದ ವರ್ಷದಿಂದ ಹಿಂದಿ, ಇಂಗ್ಲಿಷ್ ಮತ್ತು ಕನ್ನಡ ಸುದ್ದಿವಾಹಿನಿಗಳಲ್ಲಿ ಪಕ್ಷವನ್ನು ಪ್ರತಿನಿಧಿಸಿದ್ದೇನೆ. ಸುಮಾರು ಒಂದು ದಶಕದ ಅವಧಿಯಲ್ಲಿ 6,497 ಟಿವಿ ಚರ್ಚೆಗಳನ್ನು ನಡೆಸಿದ್ದೇನೆ. ಒಟ್ಟಾರೆಯಾಗಿ ಪಕ್ಷ ನೀಡಿದ ಜವಾಬ್ದಾರಿಗಳನ್ನು ತೃಪ್ತಿಯಾಗುವಂತೆ ನಿರ್ವಹಿಸಿದ್ದೇನೆ. 2014 ಮತ್ತು 2019ರ ರಲ್ಲಿ ಕಾಂಗ್ರೆಸ್ ಸೋಲನ್ನನುಭವಿಸಿ ಪಕ್ಷ ಅತ್ಯಂತ ಕೆಟ್ಟ ಸ್ಥಿತಿಯಲ್ಲಿದ್ದ ಸಮಯದಲ್ಲೂ, ನಾನು ಎಂದಿಗೂ ಉತ್ಸಾಹ ಮತ್ತು ಶಕ್ತಿ ಮತ್ತು ಉತ್ಸಾಹದ ಕೊರತೆಯನ್ನು ಅನುಭವಿಸಲಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ನಿರಾಸಕ್ತಿ ಎದುರಿಸುತ್ತಿದ್ದೇನೆ ಎಂಬ ಭಾವ ಕಾಡಿದ್ದರಿಂದ ಪಕ್ಷಕ್ಕೆ ರಾಜನಾಮೆ ಸಲ್ಲಿಸುತ್ತಿದ್ದೇನೆ ಎಂದು ಅವರು ಬರೆದುಕೊಂಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ